ಸಿಸಿಬಿ ವಶದಲ್ಲಿ ನಟಿ ಸಂಜನಾ ಗಲ್ರಾನಿ

ಸಿಸಿಬಿ ವಶದಲ್ಲಿ ನಟಿ ಸಂಜನಾ ಗಲ್ರಾನಿ

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾನಿ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ಇಂದಿರಾನಗರದಲ್ಲಿರುವ ಸಂಜನಾ ಗಲ್ರಾನಿ ಅವರ ಫ್ಲ್ಯಾಟ್‍ಗೆ ಆಗಮಿಸಿ ಅವರ ಮೊಬೈಲ್‍ನ್ನು ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.

ಇಂದ್ರಜಿತ್ ಲಂಕೇಶ್ ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆಯಲ್ಲಿ ನೀಡಿರುವ ಮಾಹಿತಿಯಲ್ಲಿ ರಾಗಿಣಿ ದ್ವಿವೇದಿ ಜೊತೆ ಸಂಜನಾ ಗಲ್ರಾನಿ ಅವರ ಹೆಸರು ಸಹ ಕೇಳಿ ಬಂದಿತ್ತು.

ಡ್ರಗ್ಸ್ ವಿಚಾರದಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ ಸಂಬರಗಿ ಮೇಲೆ ಆಕ್ರೋಶ ಹೊರಹಾಕಿ ನನ್ನ ಅಮ್ಮನಿಗೆ ಏನಾದ್ರೂ ಆದ್ರೆ ನಾನು ಸತ್ರೂ ಅವನನ್ನು ನಾನು ಬಿಡಲ್ಲ. ಅವನೊಬ್ಬ ಬೀದಿ ನಾಯಿ ಎಂದು ಸಂಬೋಧಿಸಿದ್ದರು.

Related