ಮೇಲ್ಸೆತುವೆಗೆ ಸಂಗೊಳ್ಳಿ ರಾಯಣ್ಣ ಹೆಸರು

ಮೇಲ್ಸೆತುವೆಗೆ ಸಂಗೊಳ್ಳಿ ರಾಯಣ್ಣ ಹೆಸರು

ಬೆಂಗಳೂರು: ನಗರದ ಕೆಂಪೇಗೌಡ ಬಸ್ ನಿಲ್ದಾಣ ಬಳಿ ಇರುವ ಅನಂದ್ ರಾವ್ ವೃತ್ತದಲ್ಲಿ ಇರುವ ಮೇಲ್ಸೆತುವೆಗೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಹೆಸರಿಡಲಾಯಿತು.

ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ನಾಮಕರಣ ಮಾಡಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಯಣ್ಣ ಬ್ರಿಟಿಷರ ವಿರುದ್ಧ ಸೆಣಸಾಡಿದ ಕನ್ನಡದ ಕಲಿ. ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ವಿರುದ್ಧ ಕೊನೆ ಉಸಿರಿನವರೆಗೂ ಹೋರಾಟ ನಡೆಸಿದವರು. ಯುವ ಜನತೆಗೆ ಅತ್ಯಂತ ಸ್ಫೂರ್ತಿದಾಯಕವಾಗಿದ್ದು, ಇಂತಹ ಮಹಾನ್ ನಾಯಕನ ಹೆಸರನ್ನು ಮೇಲ್ಸೆತುವೆಗೆ ನಾಮಕರಣ ಮಾಡಿದ್ದು, ಔಚಿತ್ಯಪೂರ್ಣವಾಗಿದೆ.ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಎಲ್ಲಾ ರೀತಿಯ ಕಾರ್ಯಗಳನ್ನು ಮಾಡುತ್ತಿದೆ. ನಗರದ ವಾಹನ ದಟ್ಟಣೆ ನಿವಾರಿಸುವಲ್ಲಿ ಈ ಮೇಲ್ಸಿತುವೆ ಸಹಾಯಕವಾಗಲಿದೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ, ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಗಾಂಧಿನಗರ ಶಾಸಕರಾದ ಶ್ರೀ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Related