ಸರ್ವಋತು ರಸ್ತೆ ನಿರ್ಮಾಣಕ್ಕೆ ಭರವಸೆ

  • In State
  • August 30, 2021
  • 383 Views
ಸರ್ವಋತು ರಸ್ತೆ ನಿರ್ಮಾಣಕ್ಕೆ ಭರವಸೆ

ಯಲ್ಲಾಪುರ : ಕಳಚೆ ಗ್ರಾಮದಲ್ಲಿ ಅತಿವೃಷ್ಟಿಯಿಂದ ಭೂ ಕುಸಿತವಾದ ಪ್ರದೇಶಗಳನ್ನು ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ. ಪಾಟೀಲರು, ಕಾರ್ಮಿಕ ಸಚಿವ ಶ್ರೀ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಂತರ ಸ್ಥಳೀಯ ಗ್ರಾಮಸ್ಥರ ಮನವಿ ಸ್ವೀಕರಿಸಿದ ಅವರು, ಬೆಂಗಳೂರಿನಿಂದ ನಿರ್ಣಯ ತೆಗೆದುಕೊಳ್ಳುದಕ್ಕೂ, ಸ್ಥಳ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಈಗಾಗಲೇ ಮುಖ್ಯಮಂತ್ರಿಯವರು ಜಿಲ್ಲೆಯ ನೆರೆ ಪೀಡಿತ, ಭೂ ಕುಸಿತ ಸ್ಥಳಗಳನ್ನು ಪರಿಶೀಲಿಸಿ ಜಿಲ್ಲೆಗೆ 210 ಕೋಟಿ ರೂ. ಅನುದಾನ ನೀಡಿದ್ದಾರೆ. ಪಿ.ಡಬ್ಲ್ಯೂ ಡಿ.ಇಲಾಖೆಯಿಂದ ಹಾನಿಯಾದ ಪ್ರದೇಶದಲ್ಲಿ ಸರ್ವಋತು ರಸ್ತೆ ನಿರ್ಮಾಣ ಮಾಡಲಾಗುವುದು. ಹೆಚ್ಚಿನ ಅನುದಾನಕ್ಕಾಗಿ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ, ಜನರು ಭಯ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಮೂಲಸೌಕರ್ಯ, ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ವೇಳೆ ಜಿಲ್ಲೆಯ ಲೋಕೋಪಯೋಗಿ ಅಧಿಕಾರಿಗಳು, ಅರಣ್ಯ ಅಧಿಕಾರಿಗಳು ರಸ್ತೆ ತೆರವು ಕಾರ್ಯದಲ್ಲಿ ಸಾಕಷ್ಟು ಶ್ರಮಿಸಿದ್ದು ಅವರಿಗೆ ಕೃತಜ್ಞತೆ ಸಲ್ಲಿಸಿದರು. ಶಿರಸಿಯ ಸಹಾಯಕ ಆಯುಕ್ತರಾದ ಆಕೃತಿ ಬನ್ಸಾಲ್, ತಾಲೂಕಿನ ತಹಶೀಲ್ದಾರ್, ಅರಣ್ಯ ಅಧಿಕಾರಿಗಳು ಇನ್ನಿತರರಿದ್ದರು.

Related