ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್ಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವಾರು ಚರ್ಚೆಗಳು ಗ್ರಾಸವಾಗಿ ನಡೆಯುತ್ತಿರುವ ಬೆನ್ನಲೇ ಸಚಿವ ಜಾರಕಿಹೊಳಿ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ ಇದರಿಂದ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲಲುವೇ ಸೃಷ್ಟಿಯಾಗಿದೆ.
ಹೌದು, ರಾಜ ರಾಜಕೀಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಸದನದಲ್ಲೂ ಕೂಡ ಭಾರೀ ಸದ್ದುಮಾಡಿದ್ದು ರಾಜ್ಯ ಮಾತ್ರವಲ್ಲದೆ ದೆಹಲಿ ನಾಯಕರನ್ನು ಕೂಡ ಹನಿಟ್ರ್ಯಾಪ್ಗೆ ಬಲಿ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೇವಲ 40 ನಾಯಕರಲ್ಲ, ಕನಿಷ್ಠ 400 ಜನರನ್ನೂ ಹನಿಟ್ರ್ಯಾಪ್ಗೆ ಬಲಿ ಮಾಡಲಾಗಿದೆ. ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್ಗೆ ಬಲಿ ಮಾಡಲಾಗಿದ್ದು, ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಭಾವಿ ಸಚಿವರನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡ್ತಿದ್ದಾರೆ..!
ಇನ್ನು ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ. ಹನಿಟ್ರ್ಯಾಪ್ ಮಾಡುವ ಪ್ರಯತ್ನಗಳ ವಿರುದ್ಧ ದೂರು ದಾಖಲಿಸುವಂತೆ ಸಚಿವ ರಾಜಣ್ಣ ಅವರಿಗೆ ನಾನೇ ಹೇಳಿದ್ದೆ ಎಂದು ತಿಳಿಸಿದರು. ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ ಎಂದು ಅವರು ಹೇಳಿದರು. ತಮ್ಮ ಕೆಲಸ ಸಾಧಿಸಲು ಹನಿಟ್ರ್ಯಾಪ್ ಮಾಡಿ ಅಧಿಕಾರಿಗಳನ್ನು ಅವರು ಬ್ಲ್ಯಾಕ್ಮೇಲ್ ಮಾಡುತ್ತಾರೆ ಎಂದು ಅವರು ಹೇಳಿದರು.
