ಬಿ.ಎಸ್.ವೈ ವಿರುದ್ಧ ರೊಚ್ಚಿಗೆದ್ದ ಶಾಸಕ ಸತೀಶ್ ರೆಡ್ಡಿ

ಬಿ.ಎಸ್.ವೈ ವಿರುದ್ಧ ರೊಚ್ಚಿಗೆದ್ದ ಶಾಸಕ ಸತೀಶ್ ರೆಡ್ಡಿ

ಬೆಂಗಳೂರು : ಕಳೆದ ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ಕೊನೆಗೂ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ನೂತನ 7 ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಈ ಪಟ್ಟಿಯಲ್ಲಿ ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ ನಾಗರಾಜ್, ಅರವಿಂದ ಲಿಂಬಾವಳಿ, ಎಸ್. ಅಂಗಾರ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಇದೇ ಮೊದಲ ಬಾರಿಗೆ 5 ಜನ ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡಲಾಗಿದೆ. ಬಿಜೆಪಿಯಲ್ಲಿ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದು, ಸಚಿವ ಸ್ಥಾನ ಸಿಗದೆ ಅನೇಕರು ನಿರಾಸೆಗೆ ಒಳಗಾಗಿದ್ದಾರೆ. ಬೊಮ್ಮನ ಹಳ್ಳಿ ಶಾಸಕ ಸತೀಶ್ ರೆಡ್ಡಿ ಸಹ ತೀವ್ರ ಅಸಮಾಧಾನಗೊಂಡಿದ್ದು, ‘ಯಡಿಯೂರಪ್ಪನವರೇ ಸಚಿವರ ಆಯ್ಕೆಗೆ ಮಾನದಂಡ ಏನು?’ ಎಂದು ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ನಾವು ಎಂದಿಗೂ ಸಹ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡಿಲ್ಲ. ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇವೆ. ಪಕ್ಷ ನಮಗೆ ತಾಯಿ ಇದ್ದಂತೆ. ಆದರೆ, ನಮ್ಮ ಕೆಲಸವನ್ನು ಪರಿಗಣಿಸಿ ನಮಗೆ ಅಧಿಕಾರ ನೀಡಬೇಕಿತ್ತು. ಎಡವಿದ್ದಾರೆ. ಆದರೆ, ನಾವು ಎಂದಿಗೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ.

ಕೇಂದ್ರ ಮಾಜಿ ಸಚಿವ ದಿವಂಗತ ಅನಂತಕುಮಾರ್ ಹೆಗಡೆಯವರು ನಮಗೆ ತಂದೆ ಇದ್ದಂತೆ. ನಮಗೆ ಯಾವ ಸಮಸ್ಯೆ ಇದ್ದರೂ ಸಹ ಅವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುತ್ತಿದ್ದೆವು. ಆದರೆ, ಇಂತಹ ಸಂದರ್ಭದಲ್ಲಿ ನಮ್ಮ ಜೊತೆ ಅವರು ಇಲ್ಲವೆಂಬ ಭಾವನೆ  ಕಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related