ಆರೋಗ್ಯ ಸಮೀಕ್ಷೆ ಕಾರ್ಯಕ್ರಮಕ್ಕೆ ಸತೀಶ್ ರೆಡ್ಡಿ ಚಾಲನೆ

ಆರೋಗ್ಯ ಸಮೀಕ್ಷೆ ಕಾರ್ಯಕ್ರಮಕ್ಕೆ ಸತೀಶ್ ರೆಡ್ಡಿ ಚಾಲನೆ

ಬೊಮ್ಮನಹಳ್ಳಿ: ನಗರದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ, ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಸಮೀಕ್ಷೆ ನಡೆಸಲು ಮುಂದಾಗಿದೆ. ಪಾಲಿಕೆಯ ವೈದ್ಯರು ನಿಮ್ಮ ಮನೆ ಬಾಗಿಲಿಗೆ – ನಿಮ್ಮ ಆರೋಗ್ಯವೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಖ್ಯದೊಂದಿಗೆ ವೈದ್ಯರು ಮನೆ-ಮನೆಗೆ ಭೇಟಿ ನೀಡಿ ಕೋವಿಡ್‍ಗೆ ಸಂಬಂಧಿಸಿದಂತೆ ಆರೋಗ್ಯ ಸಮೀಕ್ಷೆ ನಡೆಸಲಿದ್ದಾರೆ.

ಮೊದಲ ಹಂತದಲ್ಲಿ ಪಾಲಿಕೆಯ ವಿಧಾನಸಭಾ ಕ್ಷೇತ್ರವಾರು ೨ ವಾರ್ಡ್ಗಳಂತೆ ೫೪ ವಾರ್ಡ್ಗಳನ್ನು ಆಯ್ಕೆ ಮಾಡಲಾಗಿದೆ. ಆಗಸ್ಟ್ 16 ರಿಂದ ಸಮೀಕ್ಷೆ ಆರಂಭಗೊಂಡಿದೆ. ಪ್ರತಿನಿತ್ಯ ಕನಿಷ್ಠ 50 ಮನೆಗಳ ಸಮೀಕ್ಷೆ ನಡೆಸಲಾಗುತ್ತದೆ. ಮನೆ ಭೇಟಿ ವೇಳೆ ಕೋವಿಡ್ ಸೋಂಕು ಪತ್ತೆಯಾದಲ್ಲಿ ಸೋಂಕಿತರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಹೋಮ್ ಐಸೋಲೇಷನ್ ಕಿಟ್ ನೀಡಲಾಗುತ್ತದೆ.

ಈ ಸಂಬಂಧ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಆರೋಗ್ಯ ಸಮೀಕ್ಷೆ ಕಾರ್ಯಕ್ರಮಕ್ಕೆ ಶಾಸಕ ಸತೀಶ್ ರೆಡ್ಡಿ ಚಾಲನೆ ನೀಡಿದ್ದಾರೆ. ಹೆಚ್‍ಎಸ್‍ಆರ್ ಬಡಾವಣೆ ಮತ್ತು ಅರೆಕೆರೆ ಬಡಾವಣೆಯ ಪ್ರತಿ ಮನೆಗೆ ಬಿಬಿಎಂಪಿ ವೈದ್ಯರು ಭೇಟಿ ನೀಡಿ ಆರೋಗ್ಯ ಸಮೀಕ್ಷೆ ನಡೆಸಲ್ಲಿದ್ದಾರೆ. ಕೋವಿಡ್‍ನಿಂದ ಸಾಕಷ್ಟ ಸಂಕಷ್ಟು ಅನುಭವಿಸಿದ್ದೇವೆ. ಕೋವಿಡ್ ನಿಯಂತ್ರಿಸಲು ಈ ರೀತಿಯ ಕಾರ್ಯಕ್ರಮಗಳು ನಡೆಯುತ್ತಿರಬೇಕು, ಇಲ್ಲ ಅಂದ್ರೆ ಸೋಂಕು ಇನ್ನಷ್ಟು ಉಲ್ಬಣಗೊಳ್ಳುತ್ತೆ. ಈ ಸಂಬಂಧ ಬಿಬಿಎಂಪಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಸತೀಶ್ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.

ಈ ವೇಳೆ ಬಿಬಿಎಂಪಿ ಜಂಟಿ ಆಯುಕ್ತ ರಾಮಕೃಷ್ಣ, ವೈದ್ಯಾಧಿಕಾರಿ ಡಾ. ಸುರೇಶ್ ಸೇರಿದಂತೆ ಇತರೆ ವೈದ್ಯಕೀಯ ಸಿಬ್ಬಂದಿಗಳು ಹಾಜರಿದ್ದರು.

Related