ಶತಾಯುಷಿ ತಿಮ್ಮಕ್ಕ ಆಸ್ಪತ್ರೆಗೆ

  • In State
  • May 22, 2020
  • 497 Views
 ಶತಾಯುಷಿ ತಿಮ್ಮಕ್ಕ ಆಸ್ಪತ್ರೆಗೆ

ಹಾಸನ:  ಶತಾಯುಷಿ ಸಾಲುಮರದ ತಿಮ್ಮಕ್ಕ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿದ ಪರಿಸರವಾದಿ.ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ  ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಮುಂದಿನ ಪೀಳಿಗೆಯ ಹಿತದೃಷ್ಟಿಯನ್ನು ಮನಗಂಡು ಮರಗಳಿಗೆ ನೀರುಣಿಸಿ ಬೆಳೆಸಿದ್ದಾರೆ.

ತಿಮ್ಮಕ್ಕ  ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಜನಿಸಿದರು. ಅವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭಿಸಲಿಲ್ಲ. ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು.  ಚಿಕ್ಕಯ್ಯ ಎಂಬ ಒಬ್ಬ ದನ ಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ತಿಮ್ಮಕ್ಕ ಳಿಗೆ ಮಕ್ಕಳಿಲ್ಲದ ದುಃಖ ಮರೆಯಲು ಆಲದ ಮರಗಳನ್ನು ನೆಟ್ಟರು. ಸಾಲು ಸಾಲು ಮರಗಳನ್ನು ನೆಟ್ಟಿ ಮಕ್ಕಳಂತೆ ಕಂಡರು.

ಖ್ಯಾತ ಪರಿಸರ ಹೋರಾಟಗಾರ್ತಿ, ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿ ಅಸ್ವಸ್ಥರಾಗಿದ್ದ ತಿಮ್ಮಕ್ಕ ಹಾಸನ ನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರಿನ ತಾಲ್ಲೂಕಿನ ಬಳ್ಳೂರು ಗ್ರಾನದಲ್ಲಿ ಕಳೆದೆರಡು ತಿಂಗಳಿನಿಂದ ತಿಮ್ಮಕ್ಕ ನೆಲೆಸಿದ್ದಾರೆ.

“ಹೊಟ್ಟೆ ನೋವು, ವಾಂತಿ, ಭೇದಿಯ ಕಾರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.ಸದ್ಯವೇ ಆರೋಗ್ಯ ಸುಧಾರಣೆ ಗಮನಿಸಿ ಆಸ್ಪತ್ರೆಯಿಂಡ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು  ಬಳ್ಕೂರು ಉಮೇಶ್ ಹೇಳಿದ್ದಾರೆ.

 

Related