ಅಶ್ವಥ್ ನಾರಾಯಣ್ ಗೆ ಸಿಎಂ ಬೆಂಬಲ

PSI Recruitment Scam : ಪಿಎಸ್ಐ ನೇಮಕಾತಿ  ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೇಸ್ ನಿರಾಧಾರ ಆರೋಪ ಮಾಡಿದ್ದು, ತಮ್ಮ ಪಕ್ಷದವರ ಬಣ್ಣ ಬಯಲಾಗಲಿದೆ ಎನ್ನುವ ಕಾರಣಕ್ಕೆ ಕಾಂಗ್ರೇಸ್ ಹಿಟ್  ಆ್ಯಂಡ್ ರನ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ರು. 

ಬೆಂಗಳೂರು(ಮೇ 5):  ಪಿಎಸ್ಐ ಅಕ್ರಮ ಪ್ರಕರಣ ಸಂಬಂಧ ಯಾವ ಯಾವ ದೂರುಗಳು ಬರುತ್ತವೆಯೋ?, ಯಾರು ಕೊಡುತ್ತಾರೋ ಅವೆಲ್ಲವನ್ನೂ ಪರಿಗಣಿಸುತ್ತೇವೆ. ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ. ಅವರ ತನಿಖೆಯನ್ನೂ ಮಾಡಿಸುತ್ತೇವೆ. ಅಕ್ರಮದಲ್ಲಿ ಸಹಕಾರ, ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದರೆ ಅಂತವರ ವಿರುದ್ಧ ಪ್ರಕರಣ ದಾಖಲು ಮಾಡುತ್ತೇವೆ ಎಂದರು.

ನಿಷ್ಪಕ್ಷಪಾತವಾಗಿ ನಿಷ್ಟುರವಾಗಿ ತನಿಖೆಯಾಗಬೇಕು, ಹಲವಾರು ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಮಾಡುತ್ತಿರುವುದೇ ಇದಕ್ಕೆ ಸಾಕ್ಷಿ. ಕಲಬುರಗಿ ದಿವ್ಯ ಹಾಗರಗಿ ಮಾತ್ರವಲ್ಲ, ಇನ್ನೂ ಹಲವರಿದ್ದಾರೆ. ಎಲ್ಲರನ್ನೂ ಬಂಧಿಸುತ್ತೇವೆ ಎಂದು ಖಡಕ್ ಸಂದೇಶ ರವಾನಿಸಿದರು. ಸಚಿವ ಅಶ್ವಥ್ ನಾರಾಯಣ್ ಬಗ್ಗೆ ಕಾಂಗ್ರೆಸ್ ನವರು ಆಧಾರ ರಹಿತವಾಗದ ಆರೋಪ ಮಾಡುತ್ತಿದ್ದಾರೆ. ಅವರ ಕಾಲದಲ್ಲಿ ಸಾಕಷ್ಟು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು. ಹಲವಾರು ಭಾರಿ ಪಿಎಸ್ಐ ,  ಪಿಯುಸಿ ಎಲ್ಲಾ ಪ್ರಶ್ನೆ ಪತ್ರಿಕೆ ಹೊರಗೆ ಬಂದಿದ್ದವು, ಆಗ ಅವರು ಏನೂ ಕ್ರಮ ಕೈಗೊಂಡಿರಲಿಲ್ಲ. ಈಗ ನಾವು ಕ್ರಮ ಕೈಗೊಳ್ಳುತ್ತೇವೆ ಎಂದರು.

Related