ಭಾರೀ ಮಳೆಯ ಕಾರಣದಿಂದ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಇತ್ತ ರಾಜಧಾನಿ ಬೆಂಗಳೂರು, ಹಾಸನ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಭಾರೀ ಮಳೆಯ ಕಾರಣದಿಂದ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿ, ಆಯಾ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ. ಅದರಂತೆ ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಎಡೆ ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕರ್ನಾಟಕದ ಕರಾವಳಿ ಭಾಗ ತತ್ತರಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಇಂದು ಒಂದು ದಿನದ ಮಟ್ಟಿಗೆ ದಕ್ಷಿಣ: ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Related