ಸರ್ಕಾರಿ‍‍ & ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು

ಸರ್ಕಾರಿ‍‍ & ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು

ಮಂಡ್ಯ:  ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳು ಅ ಪೌಷ್ಟಿಕತೆಯ ಕೊರತೆ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಹಾಗಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿಂದು ಚಾಲನೆ ನೀಡಲಾಯಿತು. ಕೃಷಿ ಸಚಿವರಾದ. ಎನ್ ಚಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಯೋಜನೆಗೆ ಚಾಲನೆ ನೀಡಿದರು.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿಯ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರಡು ದಿನ ಮೊಟ್ಟೆ ಹಾಗು ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಇದಾಗಿದೆ..

ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯ ರಾಜ್ಯ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಿರುವುದಕ್ಕೆ ಕೃಷಿ ಸಚಿವರು ಸಂತಸ ವ್ಯಕ್ತಪಡಿಸಿದರು.

ಈ ವರ್ಷ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಪೂರಕ‌ ಪೌಷ್ಟಿಕ ಆಹಾರವಾಗಿ ಸಿರಿಧಾನ್ಯದ ತಿನಿಸುಗಳನ್ನೂ ಸೇರ್ಪಡೆ ಗೊಳಿಸಬೇಕು. ಇದರಿಂದ ರೈತರಿಗೂ ಪ್ರೋತ್ಸಾಹ ಸಿಗಲಿದೆ, ಮಕ್ಕಳೂ ಶಕ್ತಿವಂತರಾಗುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.

 

Related