SSLC ಪರೀಕ್ಷೆಯಲ್ಲಿ 625 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಚಿವರಿಂದ ಸನ್ಮಾನ

SSLC ಪರೀಕ್ಷೆಯಲ್ಲಿ 625 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಚಿವರಿಂದ ಸನ್ಮಾನ

ಬೆಂಗಳೂರು: ಇಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಈ ಬಾರಿಯ SSLC ಪರೀಕ್ಷೆಯಲ್ಲಿ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ ಬಾಗಲಕೋಟೆಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತ ಹಾಗೂ ತೃತೀಯ ಸ್ಥಾನ ಗಳಿಸಿದ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ಅವರನ್ನು ಸನ್ಮಾನಿಸಿದರು.

ಇನ್ನು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವರು, ನಿಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿ ಸಹಾಯ ಬೇಕಾದರೂ ಕೂಡ ನಮ್ಮನ್ನು ಸಂಪರ್ಕಿಸಿ, ಸಮಾಜ ಕಲ್ಯಾಣ ಇಲಾಖೆಯಿಂದ ಸಹಾಯ ಮಾಡುವುದಾಗಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ಸಚಿವರು ತಿಳಿಸಿದರು.

ನೀವು ಕಷ್ಟಪಟ್ಟು ಈಗ ಇಡೀ ರಾಜ್ಯಕ್ಕೆ  ಪ್ರಥಮ ಸ್ಥಾನಕ್ಕೆ ಬಂದಿದ್ದೀರಿ ಹೀಗೆ ನಿಮ್ಮ ಮುಂದಿನ ವಿದ್ಯಾಭ್ಯಾಸದಲ್ಲಿ ಇದೇ ರೀತಿ ಉನ್ನತ ಸ್ಥಾನಕ್ಕೆ ಏರಬೇಕೆಂದು ವಿದ್ಯಾರ್ಥಿಗಳಿಗೆ ಸಚಿವ ಎಚ್ ಸಿ ಮಾದೇವಪ್ಪ ಅವರು ಹಾರೈಸಿದರು.

ಈ ವೇಳೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ಪ್ರವೀಣ್ ಬಾಗೇವಾಡಿ, ಜಂಟಿ ನಿರ್ದೇಶಕರಾದ ಶ್ರೀ ನಾಗೇಶ್, ಸಹಾಯ ನಿರ್ದೇಶಕರಾದ ಶ್ರೀ ಸಿ ಎಂ ಹೊನ್ನರಾಜು ಹಾಗೂ ವಿದ್ಯಾರ್ಥಿಗಳ ಪೋಷಕರು ಈ ವೇಳೆ ಉಪಸ್ಥಿತರಿದ್ದರು.

Related