ಶಿಲ್ಪಕಲಾ ಶಿಬಿರ ಉದ್ಘಾಟನೆ

ಶಿಲ್ಪಕಲಾ ಶಿಬಿರ ಉದ್ಘಾಟನೆ

ಮೈಸೂರು: ಮೈಸೂರಿನ ಕಲಾಮಂದಿರದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2022 ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಶಿಲ್ಪಕಲಾ ಶಿಬಿರವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಇದೇ ವೇಳೆ ಕರಪತ್ರಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾದ ವೀರಣ್ಣ ಅರ್ಕಸಾಲಿ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು.

Related