ಮೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಮೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು : ಮೇ 24 ರಿಂದ ಜೂನ್ 10 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ವರ್ಷ ಮಾರ್ಚ್ನಲ್ಲಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳು ಕೊರೊನಾದಿಂದಾಗಿ ಮೇ ತಿಂಗಳಿನಲ್ಲಿ ಆರಂಭವಾಗಲಿವೆ. ಕೊರೊನಾ ಲಾಕ್‌ಡೌನ್ ಕಾರಣದಿಂದಾಗಿ ಕಾಲೇಜುಗಳನ್ನು ಕೂಡ ಮುಚ್ಚಲಾಗಿತ್ತು.

ಇದೀಗ ತರಗತಿಗಳನ್ನು ತಡವಾಗಿ ಆರಂಭಿಸಿರುವ ಕಾರಣ ಪಠ್ಯಗಳನ್ನು ಪೂರೈಸಲು ಸಮಯ ಬೇಕಿದ್ದು, ಮಕ್ಕಳಿಗೂ ಓದಿಕೊಳ್ಳಲು ಹೆಚ್ಚು ಸಮಯ ಬೇಕಾಗಿರುವ ಕಾರಣ ಮೇ 24ರಿಂದ ವಾರ್ಷಿಕ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

Related