ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ನ. 29 ರಿಂದ ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಜಿಲ್ಲೆ, ತಾಲ್ಲೂಕು ಕೇಂದ್ರಗಳ ಬದಲು ಆಯಾ ಕಾಲೇಜುಗಳಲ್ಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅವಕಾಶ ಮಾಡಿಕೊಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.