ದ್ವಿತೀಯ ಪಿಯುಸಿ ಪರೀಕ್ಷೆಗೆ : ಸಿದ್ದತೆಗೆ ಎಡಿಸಿ ಸೂಚನೆ

ದ್ವಿತೀಯ ಪಿಯುಸಿ ಪರೀಕ್ಷೆಗೆ : ಸಿದ್ದತೆಗೆ ಎಡಿಸಿ ಸೂಚನೆ

ರಾಯಚೂರು : ಇದೇ 7ರಿಂದ 19ರ ವರೆಗೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲಿದ್ದು, ಶಾಂತಿ ಹಾಗೂ ಸುವ್ಯಸ್ಥೆಯಿಂದ ಈ ಪರೀಕ್ಷೆಗಳು ಜರುಗಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ದುರಗೇಶ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವಭಾವಿ ಸಿದ್ದತೆಗಳ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಪೂರಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಸ್ಥೆಗಳು, ಲೋಪಗಳು ಎದುರಾಗಬಾರದು.

ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ಅತ್ಯಂತ ಪ್ರಮುಖ, ಈ ದಿಸೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು, ಮಾಸ್ಕ್, ಸ್ಯಾನಿಟೈಸರ್ ಕೊಠಡಿಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಬೇಕು. ಪರೀಕ್ಷಾ ಕೇಂದ್ರದ ಆವರಣ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.

ಪರೀಕ್ಷಾ ಕೇಂದ್ರಗಳ ಸುತ್ತ ೧೪೪ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು, ಅದರಿಂದಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಕೆಫ್‌ಗಳನ್ನು ಬಂದ್ ಮಾಡಬೇಕು, ಪರೀಕ್ಷೆ ಕೇಂದ್ರಗಳ ನಿಗಾವಹಿಸಲು ರಾಯಚೂರು ಹಾಗೂ ಲಿಂಗಸೂಗೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕೆಂದರು.

Related