ಡಿಸಿಎಂ ಸ್ಥಾನಕ್ಕೆ ಇನ್ನೂ ಮೂವರ ಆಯ್ಕೆ; ಡಿಕೆ ಶಿವಕುಮಾರ್ ಹೇಳಿದ್ದೇನು..?

ಡಿಸಿಎಂ ಸ್ಥಾನಕ್ಕೆ ಇನ್ನೂ ಮೂವರ ಆಯ್ಕೆ; ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು: ರಾಜ ಕಾಂಗ್ರೆಸ್ ಸರ್ಕಾರದಲ್ಲಿ ಇದೀಗ ಮತ್ತೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಇನ್ನೂ ಮೂವರ ಆಯ್ಕೆ ಮಾಡಬೇಕೆಂಬ ಕೂಗು ಇದೀಗ ಜೋರಾಗಿ ಕೇಳಿ ಬರುತ್ತಿದೆ.

ಇನ್ನು ಇದರ ಬಗ್ಗೆ ಉಪಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆಸಿದ್ದು, ಇನ್ನೂ ಮೂರು ಡಿಸಿಎಂ ಬೇಕು ಎನ್ನುವವರು ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ ಎಂದು ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ಮುಂದೆ ಮಾತನಾಡುವವರು ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ, ಏನು ಬೇಕಾದರೂ ಪರಿಹಾರ ಪಡೆದುಕೊಂಡು ಬರಲಿ. ಮಾಧ್ಯಮದ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಮಾಧ್ಯಮದವರು ಪರಿಹಾರ ಕೊಡುವುದಿಲ್ಲ. ಮಾಧ್ಯಮದವರು ಪ್ರಚಾರ ಕೊಡುತ್ತಾರೆ ಅಷ್ಟೇ. ಏನೇ ಇದ್ದರೂ ಹೈಕಮಾಂಡ್ ಮುಂದೆ ಹೋಗಿ ಮಾತನಾಡಿ ಪರಿಹಾರ ತೆಗೆದುಕೊಂಡು ಬರಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಜೆಡಿಎಸ್ ಮಧ್ಯೆ ಫೈಟ್

ಡಿಸಿಎಂ ಬೇಡಿಕೆ ವಿಚಾರದಲ್ಲಿ ಮುಂಚೂಣಿಯಲ್ಲಿರುವ ಸಚಿವ ಕೆ.ಎನ್.ರಾಜಣ್ಣ ಅವರೊಂದಿಗೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದ್ದು, ಇನ್ನು ಮುಂದೆ ಈ ಕುರಿತು ಬಹಿರಂಗ ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕ ಹೇಳಿಕೆಗಳಿಂದ ಸರ್ಕಾರ ಮತ್ತು ಪಕ್ಷದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Related