ಕಾಂಗ್ರೆಸ್‌ನ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ

ಕಾಂಗ್ರೆಸ್‌ನ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ

ದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್(71). ಮುಂಜಾನೆ 3.30ರ ಸುಮಾರಿಗೆ ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಈ ಬಗ್ಗೆ ಅಹ್ಮದ್ ಪಟೇಲ್ ಪುತ್ರ ಫೈಸಲ್ ಅವರು ಸ್ಪಷ್ಟಪಡಿಸಿದ್ದಾರೆ.

ಒಂದು ತಿಂಗಳ ಹಿಂದಷ್ಟೇ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ರು. ಬಹು ಅಂಗಾಂಗ ವೈಫಲ್ಯದಿಂದಲೂ ಬಳಲುತ್ತಿದ್ದ ಅಹ್ಮದ್ ಪಟೇಲ್ ನ.25ರಂದು ಮುಂಜಾನೆ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ. 1949ರ ಆ. 21ರಂದು ಗುಜರಾತ್‌ನಲ್ಲಿ ಜನಿಸಿದ್ದ ಅಹ್ಮದ್ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಆಗಿದ್ದರು.

Related