ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ

ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ

ಬೆಂಗಳೂರು: ರಾಜ್ಯ ಸರ್ಕಾರ ಆರಂಭಿಸಿದ ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಡಿ ಈವರೆಗೂ ಬರೋಬ್ಬರಿ 100 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 20 ದಿನದಲ್ಲಿ ಅಂದರೆ, ಜೂನ್‌ 11ಕ್ಕೆ ಶಕ್ತಿ ಮಹಿಳೆಯರ ಉಚಿತ ಬಸ್‌ ಪ್ರಯಾಣ ಯೋಜನೆಗೆ ಚಾಲನೆ ನೀಡಿತು. ಅಲ್ಲಿಂದ ನಿತ್ಯ ಮಹಿಳೆಯರು ಉಚಿತ ಬಸ್‌ ಪ್ರಯಾಣ ಪಡೆಯುತ್ತಿದ್ದು, ನವೆಂಬರ್‌ 22ಕ್ಕೆ ಒಟ್ಟಾರೆ ಯೋಜನೆಯಡಿ ಪ್ರಯಾಣ ಸೌಲಭ್ಯ ಪಡೆದ ಮಹಿಳಾ ಪ್ರಯಾಣಿಕರ ಸಂಖ್ಯೆ 100,47,56,184 ತಲುಪಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related