ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥ- ಶಶಿಕಲಾ ಜೊಲ್ಲೆ

ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥ- ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳನ್ನು ಬಹಬೇಗ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಹಾಗು ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಗುರುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿ ರಾಜ್ಯದಲ್ಲಿ ದೇವಸ್ಥಾನಗಳು, ಹೊರ ರಾಜ್ಯದಲ್ಲಿರುವ ದೇವಸ್ಥಾನಗಳ ಸ್ವಚತ್ತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ದೇವಸ್ಥಾನಗಳ ಆಸ್ತಿ ಸಮೀಕ್ಷೆ ಹಾಗೂ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ 34.563 ಮುಜರಾಯಿ ದೇವಸ್ಥಾನಗಳಿವೆ.  25 ಲಕ್ಷ ವರಮಾನ ಮೀರಿದ ದೇವಸ್ಥಾನಗಳನ್ನು ಎ ಕೆಟಗೆರಿ, 5 ಲಕ್ಷ ಮೇಲ್ಪಟ್ಟು ವರಮಾನ ಇರುವ ದೇವಸ್ಥಾನಗಳನ್ನು ಬಿ ಹಾಗೂ 5 ಲಕ್ಷ ಕ್ಕಿಂತ ಕಡಿಮೆ ವರಮಾನಯಿರುವ ದೇವಸ್ಥಾನಗಳನ್ನು ಸಿ ಕೆಟಗೆರಿಯಲ್ಲಿ ವಿಂಗಡಿಸಲಾಗಿದೆ ಎಂದರು.

ರಾಜ್ಯದಲ್ಲಿ ವಕ್ಫ್ 1.05.885 ಎಕರೆ ಜಮೀನು ಗುರುತಿಸಲಾಗಿದೆ. ರಾಜ್ಯದಲ್ಲಿ 32.192 ವಕ್ಫ್ ಆಸ್ತಿ ನೊಂದಣಿಯಾಗಿದೆ. 8480 ಎಕರೆ ಒತ್ತುವರಿಯಾಗಿರುವ ಮಾಹಿತಿ ಇದೆ. ಈ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಕ್ಫ್ ಇಲಾಖೆಯಲ್ಲಿ 355 ಸಿಬ್ಬಂದಿ ಇದ್ದು, 84 ಹುದ್ದೆಗಳು ಖಾಲಿಯಿವೆ. ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುತ್ತದೆ. ಹಜ್ ಯಾತ್ರೆಗೆ ಪ್ರತಿ ವರ್ಷ ಹೋಗಲು ಅವಕಾಶ ಇದೆ. 2019-2021 ರಲ್ಲಿ ಕೊವಿಡ್ ಕಾರಣದಿಂದ ಹಜ್ ಯಾತ್ರಿಕರು ಪ್ರವಾಸ ಕೈಗೊಂಡಿಲ್ಲ. ಹೀಗಾಗಿ ಹಜ್ ಭವನವನ್ನು ಕೊವಿಡ್ ಕೇರ್ ಸೆಂಟರ್ ಮಾಡಿ ಎಲ್ಲಾ ಸಮುದಾಯದವರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

Related