ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲಾಡಳಿತ ವಿಫಲ

ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲಾಡಳಿತ ವಿಫಲ

ಚಿತ್ರದುರ್ಗ : ರಾಜ್ಯದಲ್ಲೇ ದಿನೇದಿನೇ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಡಾ. ಕೆ. ಸುಧಾಕರ್ ಚಿತ್ರದುರ್ಗ ನಗರದ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆಯಲ್ಲಿ ಸಚಿವರು ಪಾಲ್ಗೊಂಡರು. ಈ ಸಮಯದಲ್ಲಿ ಜಿಲ್ಲಾಡಳಿತ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ವಿರುದ್ಧ ಆರೋಗ್ಯ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಸರಿಯಾಗಿ ಕೋವಿಡ್ ಪರಿಸ್ಥಿತಿ ನಿಭಾಯಿಸುತ್ತಿಲ್ಲ. ನಾನು ನೇರವಾಗಿ ಹೇಳುತ್ತೇನೆ ಚಿತ್ರದುರ್ಗದಲ್ಲಿ ಬಹಳ ಕಷ್ಟವಾಗುತ್ತಿದೆ ಎಂದು ಸಚಿವರು ಹೇಳಿದರು.

ನೀವು ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ನೋಡಿ ಕಲಿಯಿರಿ. ಲಾಕ್‌ಡೌನ್‌ಗಿಂತ ಮುನ್ನ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಕರಣ ಇದ್ದವು. ನೀವು ಆ ಜಿಲ್ಲೆಗಳನ್ನು ನೋಡಿ ಫಾಲೋ ಅಪ್ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಈ ವೇಳೆ ಚಿತ್ರದುರ್ಗ ಡಿಎಚ್‌ಓ ಡಾ. ಪಾಲಾಕ್ಷ, ಡಿಎಸ್ ಡಾ. ಬಸವರಾಜ್ ಕಾರ್ಯ ವೈಖರಿ ಕುರಿತು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದು, ಡಿಎಚ್‌ಓ, ಜಿಲ್ಲಾ ಸರ್ಜನ್ ನೀವು ಸರಿಯಾಗಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

Related