ಮತ್ತೆ ಕಮಲ ಹಿಡಿದ ಶೆಟ್ಟರ್

ಮತ್ತೆ ಕಮಲ ಹಿಡಿದ ಶೆಟ್ಟರ್

ದೆಹಲಿ: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇಂದು ದೆಹಲಿಯಲ್ಲಿ ಮತ್ತೆ ಬಿಜೆಪಿ ಪಕ್ಷ ಸೇರಿದ್ದಾರೆ.

ಹೌದು, ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ, ಇದರಿಂದ ರಾಜ್ಯ ರಾಜಕೀಯದಲ್ಲಿ ಸಂಚಲನೆ ಸೃಷ್ಟಿಯಾಗಿದೆ.

ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ಜಗದೀಶ್ ಶೆಟ್ಟರ್ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದಿದ್ದರು ಆದರೆ ಈಗ ಈ ಮಾತು ಸುಳ್ಳು ಆಗಿದೆ.

ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.

 

Related