ಮುಂಬೈ; ಬಾಲಿವುಡ್ ನ ಬೆಡಗಿ ಶಿಲ್ಪಾ ಶೆಟ್ಟಿ, ದಂಪತಿಗೆ ಇಡಿ ಅಧಿಕಾರಿಗಳು ದಿಢೀರ್ ಶಾಕ್ ನೀಡಿದ್ದಾರೆ.
ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾಗೆ ಸೇರಿದ ಸುಮಾರು 98 ಕೋಟಿ ಬೆಲೆಬಾಳುವ ಆಸ್ತಿ ಮೇಲೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹೌದು, ಬಿಟ್ಕಾಯಿನ್ ಪೊಂಜಿ ಹಗರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸೇರಿದ 97.79 ಕೋಟಿ ಸ್ಥಿರ ಮತ್ತು ಚರ ಆಸ್ತಿಗಳನ್ನು 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ), 2002ರ ನಿಬಂಧನೆಗಳಡಿ ಇಡಿ ಜಪ್ತಿ ಮಾಡಿದೆ. ಜುಹುದಲ್ಲಿರುವ ಅವರ ಫ್ಲ್ಯಾಟ್, ಪುಣೆಯಲ್ಲಿರುವ ಬಂಗಲೆ, ರಾಜ್ ಕುಂದ್ರಾ ಹೆಸರಲ್ಲಿರುವ ಶೇರುಗಳನ್ನು ಜಪ್ತಿ ಮಾಡಲಾಗಿದೆ.