ಜೂನ್ 4ರ ನಂತರ ಶಿಂದೆ ಅವರ ಸರಕಾರವೇ ಪತನವಾಗಲಿದೆ: ಎಂಬಿ ಪಾಟೀಲ್

ಜೂನ್ 4ರ ನಂತರ ಶಿಂದೆ ಅವರ ಸರಕಾರವೇ ಪತನವಾಗಲಿದೆ: ಎಂಬಿ ಪಾಟೀಲ್

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಹೇಳಿಕೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಹೇಳಿದ್ದರು. ಇದಕ್ಕಿಗ ಕರ್ನಾಟಕ ರಾಜ್ಯದ ಕಾಂಗ್ರೆಸ್ ನಾಯಕರುಗಳು ಪ್ರತಿಕ್ರಿಯಿಸಿ ತಿರುಕೇಟು ನೀಡುತ್ತಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಸಚಿವ ಎಂಬಿ ಪಾಟೀಲ್ ಅವರು ತಿರುಗೇಟು ನೀಡಿದ್ದು, ಏಕನಾಥ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.

ಇದನ್ನೂ ಓದಿ: ವಿಪತ್ತು ನಿರ್ವಹಣಾ ತಂಡಗಳ ನಿಯೋಜನೆ

ರಾಜ್ಯದಲ್ಲಿ 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು.ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ಅವರು ವಿವರಿಸಿದರು.

 

Related