ಮತ್ತೆ ಮಾಸ್ ಲುಕ್ಕಿನಲ್ಲಿ ಶಿವಣ್ಣ!

ಮತ್ತೆ ಮಾಸ್ ಲುಕ್ಕಿನಲ್ಲಿ ಶಿವಣ್ಣ!

ಬೆಂಗಳೂರು: ಸೆಂಚುರಿ ಸ್ಟಾರ್ ಶಿವಣ್ಣ ಮತ್ತೆ ಅಭಿಮಾನಿಗಳಿಗೆ ಇನ್ನೊಂದು ಹೊಸ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಕರುನಾಡ ಚಕ್ರವರ್ತಿ ಮತ್ತೆ ಮಾಸ್ ಲುಕ್ ನಲ್ಲಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯೆಸ್..‌ ಶಿವಣ್ಣ ನಟನೆಯ 131ನೇ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ಮೂಲಕ ಶಿವರಾಜ್ ಕುಮಾರ್ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದ್ದಾರೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

Related