ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿರುವ ಶಿವಣ್ಣ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿರುವ ಶಿವಣ್ಣ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಯುಕ್ತ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಅವರು ಪ್ರಚಾರದಲ್ಲಿ ತೊಡಗಿದರು ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಕಂಡು ಬಂದಿದ್ದು ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು.

ಇದೀಗ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಇಂದು ಅವರು ಡಿಸ್ಚಾರ್ಜ್ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹೌದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ನೆನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಕಿಡ್ನಿ ಸ್ಟೋನ್ ಆಗಿತ್ತು ಎನ್ನುವ ಮಾಹಿತಿ ಹೊರತುಪಡಿಸಿ ಯಾವುದೇ ಗಂಭೀರ ಸ್ವರೂಪದ ಕಾರಣಗಳು ತಿಳಿದುಬಂದಿಲ್ಲ ಎಂದ ವೈದ್ಯರ ಮೂಲಗಳು ತಿಳಿಸಿದೆ. ಇದೀಗ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು ಇಂದು ಡಿಸ್ಚಾರ್ಜ್ ಆದ ನಂತರ ಮತ್ತೆ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

 

Related