ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ

ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೆನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು ಬೆಂಗಳೂರು ನಗರವಾಸಿಗಳು ಮಳೆಗೆ ತತ್ತರಿಸಿದ್ದಾರೆ. ಬಿಟ್ಟು ಬಿಡದೆ ಸುರಿಯುತ್ತಿರುವ ತುಂತುರು ಮಳೆಯಿಂದಾಗಿ ವಾಹನ ಸವಾರರ ಬೀದಿಬದಿ ವ್ಯಾಪಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಇನ್ನು ಕೆಲಸಗಾರರು ಹಾಗೂ ಶಾಲಾ ಮಕ್ಕಳು ಮಳೆಯಿಂದಾಗಿ ಕತ್ತರಿಸುತ್ತಿದ್ದಾರೆ.

ಹೌದು, ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು (ಮಂಗಳವಾರ) ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರಾತ್ರಿಯಿಂದಲೇ ಕೆಲವೆಡೆ ಜಡಿ ಮಳೆ ಶುರುವಾಗಿದೆ.
ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇದ್ದು ಕೆಲವು ನಗರ ಪ್ರದೇಶಗಳಲ್ಲಿ ಸೋನೆ ಮಳೆಯಾಗುತ್ತಿದ್ದು, ಕೆ ಆರ್ ಪುರಂ, ಟಿನ್ ಫ್ಯಾಕ್ಟ್ರಿ ಮಹದೇವಪುರ, ಎಚ್ಎಸ್ಆರ್ ಲೇಔಟ್, ಹೊಸಕೋಟೆ, ಶಿವಾಜಿನಗರ, ಮೆಜೆಸ್ಟಿಕ್, ಎಂಜಿ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗುತ್ತಿದ್ದು

ನಗರದ ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ವರುಣ ಅಬ್ಬರಿಸುವ ಸಂಭವ ಇದೆ.

ಕರಾವಳಿಯ ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 6 ಸೆಂಟಿ ಮೀಟರ್ ಮಳೆಯಾಗಿದೆ.

 

Related