ಸಿದ್ದರಾಮಯ್ಯ ಅವರು ಸ್ವಾಮೀಜಿಯವರ ಮಾತಿಗೆ ಮಣಿದು ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡ್ತಾರೆ..?

ಸಿದ್ದರಾಮಯ್ಯ ಅವರು ಸ್ವಾಮೀಜಿಯವರ ಮಾತಿಗೆ ಮಣಿದು ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡ್ತಾರೆ..?

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಅವರ 515ನೆಯ ಜಯಂತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೆಂಗೇರಿ ಆದಿಚುಂಚನಗಿರಿ ಶಾಖಾ ಮಠದ ಚಂದ್ರಶೇಖರ ಸ್ವಾಮೀಜಿಗಳು ಸೇರಿಕೊಂಡು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಕೆಂಗೇರಿ ಆದಿಚುಂಚನಗಿರಿ ಶಾಖಾ ಮಠದ ಚಂದ್ರಶೇಖರ ಸ್ವಾಮಿಗಳು ಮಾತನಾಡಿ, ಸಿದ್ದರಾಮಯ್ಯ ಅವರಿಗೆ ನೇರವಾಗಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡ ಅವರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಲ್ಲೇ ಚಂದ್ರಶೇಖರ ಸ್ವಾಮೀಜಿಯವರು ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲೇ ಒಕ್ಕಲಿಗ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ ಮಾಡಿದರು. ಮುಂದುವರೆದು, ಯಾವುದೇ ಕಾರಣಕ್ಕೂ ಬೆಂಗಳೂರು ಭಾಗ ಮಾಡೋಕೆ ಹೋಗಬೇಡಿ. ಬೆಂಗಳೂರು ಒಂದಾಗಿಯೇ ಇರಲಿ. ಮುಖ್ಯಮಂತ್ರಿಗಳು ತಮ್ಮ ಸ್ಥಾನ ಬಿಟ್ಟಕೊಡಲಿ ಎಂದು ನೇರವಾಗಿ ಹೇಳಿದರು.

ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿ ಸರ್ಕಾರ ಅಧಿಕಾರಕ್ಕೆ ತರಲು ನಿಮ್ಮೊಂದಿಗೆ ಶ್ರಮಿಸಿದ ಡಿ.ಕೆ. ಶಿವಕುಮಾರ್ ಮಾತ್ರ ಈವರೆಗೆ ಸಿಎಂ ಆಗಿಲ್ಲ. ಸಿದ್ದರಾಮಯ್ಯ ದಯವಿಟ್ಟು ಡಿಕೆಶಿಗೆ ಅಧಿಕಾರ ಬಿಟ್ಟು ಕೊಡಬೇಕು. ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ರೆ ಮಾತ್ರ ಇದು ಆಗುತ್ತದೆ. ವೇದಿಕೆಯಲ್ಲಿಯೇ ಸಿಎಂ ಸಿದ್ದರಾಮಯ್ಯಗೆ ನಾನು ಮತ್ತೊಮ್ಮೆ ನಮಸ್ಕಾರ ಮಾಡ್ತೀನಿ. ನೀವು ಡಿ.ಕೆ. ಶಿವಕುಮಾರ್ ಅವರನ್ನು ದಯವಿಟ್ಟು ಮುಖ್ಯಮಂತ್ರಿ ಮಾಡಿ ಎಂದು ಮನವಿಯನ್ನೂ ಮಾಡಿಕೊಂಡರು.

ಹಾಗಾದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಂದ್ರಶೇಖರ ಸ್ವಾಮೀಜಿಯವರ ಮಾತಿಗೆ ಮಣಿದು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡುತ್ತಾರೆ ಎಂದು ಕಾದು ನೋಡಬೇಕಿದೆ.

Related