ಸಿದ್ದರಾಮಯ್ಯ ಅವರು ವಿಧಾನಸಭಾ ಚುನಾವಣೆ ಗುಂಗಿನಿಂದ ಹೊರ ಬಂದಿಲ್ಲ : ಯಡಿಯೂರಪ್ಪ

ಸಿದ್ದರಾಮಯ್ಯ ಅವರು ವಿಧಾನಸಭಾ ಚುನಾವಣೆ ಗುಂಗಿನಿಂದ ಹೊರ ಬಂದಿಲ್ಲ : ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನು ವಿಧಾನಸಭಾ ಚುನಾವಣೆ ಗುಂಗಿನಿಂದ ಹೊರ ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಈಗ ನಡೆಯುತ್ತಿರುವುದು ಲೋಕಸಭಾ ಚುನಾವಣೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭಾ ಚುನಾವಣೆಯಲ್ಲಿ ಜನರನ್ನು ಸುಳ್ಳಿನಿಂದ ಯಾಮಾನಿಸಿದಂತೆ ಈಗ ನಡೆಯುತ್ತಿರುವ ಚುನಾವಣೆಯಲ್ಲಿ ಸಾರ್ವಜನಿಕರನ್ನು ಯಾಮಾರಿಸಲು ಸಾಧ್ಯವಿಲ್ಲವೆಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭಾ ಚುನಾವಣೆ ಗುಂಗಿನಿಂದ ಇನ್ನು ಕೂಡ ಹೊರಬಂದಿಲ್ಲ ಎಂದು ಹೇಳಿದರು. ಕಾಂಗ್ರೆಸ್‌ನಲ್ಲಿ ವಿಶ್ವಾಸಾರ್ಹ ನಾಯಕತ್ವವೇ ಇಲ್ಲ. ಕಾಂಗ್ರೆ ಸಿಗರು ಕೇಂದ್ರ ಸರ್ಕಾರದ ಅನುದಾನದ ವಿಚಾರದಲ್ಲಿ ಜನರನ್ನು ದಾರಿತಪ್ಪಿಸಿ, ವಿವಾದ ಸೃಷ್ಟಿಸುತ್ತಿದ್ದಾರೆ. ಈ ಮೂಲಕ ಜನರ ಬೆಂಬಲ ಗಳಿಸುವ ಭ್ರಮೆಯಲ್ಲಿದ್ದಾರೆ. ಬಿಜೆಪಿ ಮೋದಿಯ ಸಾಧನೆ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದ್ದರೆ, ಕಾಂಗ್ರೆಸ್ ಸುಳ್ಳಿನ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದೆ.

ಇದನ್ನೂ ಓದಿ: ಭವಾನಿಗೂ ಶುರುವಾಯ್ತು ಸಂಕಷ್ಟ..!

ಪ್ರಪಂಚದಲ್ಲಿ ಭಾರತ ಬಲಿಷ್ಠ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ ಎಂದರು. ಬಿಜೆಪಿ ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಪಡಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದರೆ ಅದನ್ನು ಮರುಸ್ಥಾಪಿಸು ವುದಾಗಿ ಹೇಳಿದೆ. ಕಾಂಗ್ರೆಸ್ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬಿಸಿ ವರ್ಗದ ಜೀವನ ಕಷ್ಟಕರವಾಗಲಿದೆ ಎಂದು ವಾಗ್ದಾಳಿ ನಡೆಸಿದರು.

 

Related