ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ: ಬಿವೈ ವಿಜಯೇಂದ್ರ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ: ಬಿವೈ ವಿಜಯೇಂದ್ರ

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ರಾಜ್ಯದ ಜನತೆಗೆ ಏನು ಉಪಯೋಗವಾಗಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ಜನತೆಗೆ ಹಲವಾರು ಯೋಜನೆಗಳನ್ನು ನೀಡಿ ಮೋಸ ಮಾಡುತ್ತಿದೆ. ಇನ್ನುಈ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಉಪಯೋಗವಾಗುತ್ತಿಲ್ಲ ಎಂದು ಬಿಜೆಪಿಯ ರಾಜ್ಯಧ್ಯಕ್ಷ ವಿಜಯೇಂದ್ರ ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ಏನು ಕಡೆದು ಕಟ್ಟೆ ಹಾಕಿಲ್ಲ ಎಂದು ಹೇಳಿದರು.

ಇದು ವಿಧಾನಸೌಧದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಜೆಟ್ ಅಧಿವೇಶನದಲ್ಲಿ ಭಾಷಣ ಮಾಡಿ ಈ ಹೇಳಿಕೆಯನ್ನು ಹೇಳಿದ್ದರು. ಇನ್ನು ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮರೆಮಾಚಲು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

Related