ಇಷ್ಟೆಲ್ಲಾ ಆದ್ಮೇಲೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು: ಆರ್ ಅಶೋಕ್

ಇಷ್ಟೆಲ್ಲಾ ಆದ್ಮೇಲೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು: ಆರ್ ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಕ್ಕಲಿಗ ಸ್ವಾಮೀಜಿ ಒಬ್ಬರು ಬೃಹತ್ ವೇದಿಕೆ ಮೇಲೆಯೇ ಸಿದ್ದರಾಮಯ್ಯ ಅವರಿಗೆ ಅವರ ಸಿಎಂ ಸ್ಥಾನವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆ ಗುರುವಾರ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಬೃಹತ್ ವೇದಿಕೆ ಮೇಲೆ ಇಷ್ಟೊಂದು ಅವಮಾನ ಆದಮೇಲೂ ಕೂಡ ಸಿಎಂ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಎಂಬುದು ಗೊತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರಿಗೆ ರಾಜಕೀಯದ ಒಳಗೆ ಹೋಗಿ ತಿಳಿದುಕೊಳ್ಳುವ ಸಾಮರ್ಥ್ಯ ಇದೆ ಎಂದರು.

ಒಂದು ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದರು.

 

Related