ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ: ಸಿದ್ದರಾಮಯ್ಯ

ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ: ಸಿದ್ದರಾಮಯ್ಯ

ಬಾದಾಮಿ: ಬಾದಾಮಿ ತಾಲೂಕಿನ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೋವಿಡ್ ಕೇಂದ್ರದಲ್ಲಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದರು.

ಸೋಂಕಿತರಿಗೆ ಬೆಡ್, ಮಾತ್ರೆ, ಉಟೋಪಚಾರದ ಸೌಕರ್ಯ ಒದಗಿಸುವಂತೆ ಅವರು ಡಿಸಿಯವರಿಗೆ ಸೂಚಿಸಿದರು. ತಾಲೂಕಿನಲ್ಲಿ ಸೋಂಕು ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

Related