ಸಿದ್ದರಾಮಯ್ಯ ಸುಳ್ಳು ಹೇಳುವುದು ಅವರ ಹುದ್ದೆಗೆ ಶೋಭೆ ತರುವುದಿಲ್ಲ: ಜಿಟಿ ದೇವೇಗೌಡ

ಸಿದ್ದರಾಮಯ್ಯ ಸುಳ್ಳು ಹೇಳುವುದು ಅವರ ಹುದ್ದೆಗೆ ಶೋಭೆ ತರುವುದಿಲ್ಲ: ಜಿಟಿ ದೇವೇಗೌಡ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣ ಈಗಾಗಲೇ ದೇಶದಾದ್ಯಂತ ಸುದ್ದಿ ಆಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯಕ್ಕೋಸ್ಕರ ಸುಳ್ಳು ಹೇಳುವುದು ಅವರ ಹುದ್ದೆಗೆ ಶೋಭೆ ತರುವುದಿಲ್ಲವೆಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಅವರು ಹೇಳಿದ್ದಾರೆ.

ದೇವೇಗೌಡರೇ ವಿದೇಶಕ್ಕೆ ಕಳಿಸಿಕೊಟ್ಟರು, ಪ್ರಧಾನಿ ಮೋದಿ ಪಾಸ್‌ಪೋರ್ಟ್‌‌‌‌ ಸಿದ್ಧಮಾಡಿ ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಈ ಮಾತಿಗೆ ಈಗ ಜಿಟಿ ದೇವೇಗೌಡರು ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಏಕೆ ತನಿಖೆ ಮಾಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಮಾತಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡಿದ್ದಕ್ಕೆ ಈ ರೀತಿ ಆರೋಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಂಸದರಾಗಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಿದ ಮೇಲೆ ಅವರಿಗೆ ರೆಡ್ ಪಾಸ್‌ಪೋರ್ಟ್‌‌‌‌ ಕೊಡುತ್ತಾರೆ. ರೆಡ್ ಪಾಸ್‌ಪೋರ್ಟ್‌‌‌‌ ಇದ್ದವರು ವಿದೇಶಗಳಿಗೆ ಹೋಗಬಹುದು. ಪ್ರಜ್ವಲ್​​​​​ ತಪ್ಪಿತಸ್ಥ ಎಂದು ಸಾಬೀತಾದರೆ ಪಕ್ಷದಿಂದ ಉಚ್ಚಾಟಿಸುತ್ತೇವೆ. ಸರ್ಕಾರ ನಿಮ್ಮ ಕೈಯಲ್ಲಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಎಸ್ಐಟಿ ತನಿಖೆ ಆರಂಭದ ಮುಂಚಿತವಾಗಿ ತನಿಖೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ತನಿಖೆ ನಡೆಯುತ್ತಿದೆ ತನಿಖೆ ನಡೆದು ತಪ್ಪಿತಸ್ಥ ಎಂದು ಸಾಬೀತಾದರೆ ಶಿಕ್ಷೆ ಆಗಲಿ ಎಂದಿದ್ದಾರೆ.

 

Related