ಸಿದ್ಧಾರೂಢ ಸ್ವಾಮಿಗಳ ದಾಸೋಹ ಸ್ಥಗಿತ

  • In State
  • April 4, 2020
  • 416 Views
ಸಿದ್ಧಾರೂಢ ಸ್ವಾಮಿಗಳ ದಾಸೋಹ ಸ್ಥಗಿತ

ಹುಬ್ಬಳ್ಳಿ:ಏ,4:  ಮಹಾಮಾರಿ ರೋಗಗಳಾದ ಪ್ಲೇಗ್, ಮಲೇರಿಯಾ, ಮಾರ್ಯಮ್ಮನ ರೋಗ ಬಂದಾಗಲೂ ಸಿದ್ಧಾರೂಢರು ತಮ್ಮನ್ನು ಭೇಟಿ ಮಾಡಲು ಆಗಮಿಸುವ ಭಕ್ತರಿಗೆ ದಾಸೋಹ ನಿಲ್ಲಿಸಿರಲಿಲ್ಲವಂತೆ.ಹಾಗೆ ಕೋವಿಡ್ 19 ವೈರಸ್ ಭೀತಿಯ ಹಿನ್ನೆಲೆ ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ದಾಸೋಹ ನಡೆಯುತ್ತ ಬಂದಿದ್ದು.ಇದು ಸುಮಾರು 135 ವರ್ಷಗಳಿಂದ ನಡೆಯುತ್ತ ಬಂದಿದ್ದ ದಾಸೋಹ ಶನಿವಾರದಿಂದ ಸ್ಥಗಿತಗೊಂಡಿದೆ.ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಗಳು ದೇಶದ ಎಲ್ಲ ಕ್ಷೇತ್ರಗಳನ್ನು ಸಂಚರಿಸುತ್ತ,ಅಜ್ಞಾನ ನಿವಾರಿಸಿ ಸನ್ಮಾರ್ಗ ತೋರುತ್ತ 1877ರಲ್ಲಿ ತಮ್ಮ 41ನೇ ವಯಸ್ಸಿನಲ್ಲಿ ಹುಬ್ಬಳ್ಳಿಗೆ ಆಗಮಿಸಿದರು. ತಮ್ಮನ್ನು ಭೇಟಿ ಮಾಡಲು ಆಗಮಿಸುವ ಭಕ್ತರು ಹಸಿವಿನಿಂದ ಹೋಗಬಾರದೆಂಬ ಉದ್ದೇಶದಿಂದ ಸುಮಾರು 1885-87ರಲ್ಲಿ ಅನ್ನಸಂತರ್ಪಣೆ ಆರಂಭಿಸಿದ್ದರು. ಅಂದಿನಿಂದ ಅನ್ನಸಂತರ್ಪಣೆ ಪ್ರತಿದಿನ ನಿರಂತರವಾಗಿ ನಡೆಯುತ್ತ ಬಂದಿತ್ತು. 1918-20ರಲ್ಲಿ ಮಹಾಮಾರಿ ರೋಗಗಳಾದ ಪ್ಲೇಗ್, ಮಲೇರಿಯಾ, ಮಾರ್ಯಮ್ಮನ ರೋಗ ಬಂದಾಗಲೂ ಸಿದ್ಧಾರೂಢರು ತಮ್ಮನ್ನು ಭೇಟಿ ಮಾಡಲು ಆಗಮಿಸುವ ಭಕ್ತರಿಗೆ ದಾಸೋಹ ನಿಲ್ಲಿಸಿರಲಿಲ್ಲವಂತೆ.
ಅಷ್ಟೇ ಅಲ್ಲ ಹುಬ್ಬಳ್ಳಿಯಲ್ಲಿ ಗಲಾಟೆಗಳಾಗಿ ಕರ್ಫ್ಯೂ ಹೇರಿದ್ದಾಗಲೂ ಮಠದಲ್ಲಿನ ಅನ್ನಸಂತರ್ಪಣೆಗೆ ಮಾತ್ರ ಯಾವುದೇ ಅಡೆತಡೆ ಆಗಿರಲಿಲ್ಲ. ಆದರೀಗ ಕೋವಿಡ್ 19 ವೈರಸ್ ಸೋಂಕಿನಿಂದ ಭಕ್ತರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಶ್ರೀಮಠದಲ್ಲಿ ನಿರಂತರವಾಗಿ ನಡೆಯುತ್ತಿಅನ್ನಸಂತರ್ಪಣೆ(ದಾಸೋಹ)ಯನ್ನು ಶನಿವಾರದಿಂದ ಮಾ.31ರವರೆಗೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

Related