ಸಿದ್ದುಗೆ ಒಲಿದ ಸಿಎಂ ಪಟ್ಟ!!

ಸಿದ್ದುಗೆ ಒಲಿದ ಸಿಎಂ ಪಟ್ಟ!!

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಹೊರ ಬಿದ್ದಿದ್ದರೂ ಕಳೆದ ಮೂರು ನಾಲ್ಕು ದಿನಗಳಿಂದ ಕರ್ನಾಟಕದ ಸಿಎಂ ಪಟ್ಟವನ್ನು ಯಾರು ಏರಲಿದ್ದಾರೆ ಎನ್ನುವ ಕುತೂಹಲ ಮೂಡಿತು.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಸಿಎಂ ಪಟ್ಟಕ್ಕಾಗಿ ಹಗ್ಗ ಜಗ್ಗಾಟ ನಡೆಸಿದ್ದರು. ಕೊನೆಗೂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸಿಎಂ ಪಟ್ಟ ಕಟ್ಟಲು ರೆಡಿಯಾಗಿದ್ದಾರೆ.

ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ ಅವರಿಗೆ ಒಲಿದಿದೆ.  ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು ಅಧಿಕೃತ ಘೋಷಣೆ ಮಾಡಿದೆ. ಇದರೊಂದಿಗೆ ಕಳೆದ ನಾಲ್ಕೈದು ದಿನಗಳಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಯಾದಂತಾಗಿದೆ.

ಇನ್ನು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ  ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಹೈಕಮಾಂಡ್ ಸರಣಿ ಸಭೆಗಳನ್ನು ಮಾಡುವ ಮೂಲಕ ಮುಂದಿನ ಲೋಕಾಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅಂತಿಮವಾಗಿ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಿದೆ. ಇದರೊಂದಿಗೆ ಕರ್ನಾಟಕ ಸಿಎಂ ಯಾರಾಗುತ್ತಾರೆ ಎನ್ನುವ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ.

 

Related