ಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು

ಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು

ಬಾಗಲಕೋಟೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಕೆಪಿಸಿಸಿ ನಾಯಕತ್ವಕ್ಕೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ನೊಳಗೆ ಭಿನ್ನಾಭಿಪ್ರಾಯಗಳಿವೆ. ಸಿದ್ದರಾಮಯ್ಯನವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಹೇಳಿದರು.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ತಮ್ಮನ್ನು ಮೂಲುಗುಂಪು ಮಾಡಬಹುದು ಎಂಬ ಭಯ ಸಿದ್ದರಾಮಯ್ಯನವರಿಗಿದೆ. ಇದಕ್ಕಾಗಿ ಹೇಗಾದರೂ ಮಾಡಿ ಶಿವಕುಮಾರ್ ಅವರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳಬೇಕೆಂಬ ಹಪಾಹಪಿಯಲ್ಲಿ ಅವರಿದ್ದಾರೆ. ಶಿವಕುಮಾರ್ ಅವರು ತಮ್ಮ ಸ್ಥಾನವನ್ನು ಹೇಗೆ ಭದ್ರ ಮಾಡಿಕೊಳ್ಳುತ್ತಾರೆ ಎಂದು ನೋಡೋಣ ಎಂದು ಶ್ರೀರಾಮುಲು ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಬಗ್ಗೆ ಕೇಳಿದಾಗ, ಕಾಂಗ್ರೆಸ್ ಈ ವದಂತಿಯನ್ನು ಹಬ್ಬಿಸಿದೆ, ಮುಂದಿನ ಎರಡೂವರೆ ವರ್ಷಗಳ ಕಾಲ ಬಿಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ, ಈ ಬಗ್ಗೆ ಪಕ್ಷದೊಳಗೆ ಸಹ ಯಾವುದೇ ಮಾತುಕತೆ, ಚರ್ಚೆ ನಡೆಯುತ್ತಿಲ್ಲ ಎಂದರು.

Related