ಸಿದ್ದು ವಿರುದ್ಧ ಗೌಡರು ವಾಗ್ದಾಳಿ

ಸಿದ್ದು ವಿರುದ್ಧ ಗೌಡರು ವಾಗ್ದಾಳಿ

ಹುಬ್ಬಳ್ಳಿ, ಫೆ. 16 : ಹುಬ್ಬಳ್ಳಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸುದ್ದಿಗೋಷ್ಠಿ ನಡೆಸಿದ್ದು, ಯಡಿಯೂರಪ್ಪ ಇನ್ನೂ ಮೂರು ವರ್ಷ ಅಧಿಕಾರ ನಡೆಸಲು ನಮ್ಮದು ಯಾವುದೇ ಅಭ್ಯಂತರ ಇಲ್ಲ. ಆದ್ರೆ ಈ ಸರ್ಕಾರದ ಅಧಿಕಾರ ಬಂದ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕುಮಾರಸ್ವಾಮಿ ಅವಧಿಯಲ್ಲಿ ಮಂಜೂರಾದ ಎಲ್ಲ ಕೆಲಸ ರದ್ದು ಮಾಡಲಾಗಿದೆ. ಯಡಿಯೂರಪ್ಪ ರಾಜಕೀಯ ದ್ವೇಷ ಸಾಧಿಸುವುದಿಲ್ಲ ಎಂದಿದ್ದರು. ಆದ್ರೇ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಅಧಿಕಾರಿಗಳನ್ನು ಮಾರ್ಪಡು ಮಾಡಿದ್ದಾರೆ. ಕುಮಾರಸ್ವಾಮಿ ಮಂಜೂರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ತಡೆ ಹಿಡಿದಿದ್ದಾರೆ. ಇದರ ವಿರುದ್ಧ ಸದನದ ಒಳಗೆ ಹಾಗು ಹೊರಗೆ ಹೋರಾಟ ಮಾಡುತ್ತೇವೆ. ಹಳೆ ರಾಜಕೀಯ ದ್ವೇಷದಿಂದ ನಮ್ಮ ಮೇಲೆ ಹಗೆತನ ಸಾಧಿಸಿದ್ರೆ ಸುಮ್ಮನೆ ಕೂರಲು ಆಗಲ್ಲ. ಪೊಲೀಸರನ್ಮು ಬಳಿಸಿಕೊಂಡು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಹೆಚ್ಡಿಡಿ ಆರೋಪಿಸಿದ್ದಾರೆ.

Related