ಸಿಲಿಕಾನ್‌ ಸಿಟಿಯಲ್ಲಿ ಬಿಡದ ಮೆಳೆ

ಸಿಲಿಕಾನ್‌ ಸಿಟಿಯಲ್ಲಿ ಬಿಡದ ಮೆಳೆ

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು ಇಂದು ಸಹ ಬೆಂಗಳೂರಿನಲ್ಲಿ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕಳೆದ ಕೆಲ ದಿನಗಳಿಂದ ರಾಜ್ಯ ರಾಜಧಾನಿಯಲ್ಲಿ ಮಳೆ ಸುರಿಯುತ್ತಿದೆ. ಅದೇ ರೀತಿಯಾಗಿ ಇಂದು ಕೂಡ ಬೆಂಗಳೂರಿನ ಹಲವು ನಗರಗಳಲ್ಲಿ ಭಾರೀ ಮಳೆಯಾಗಿದೆ. ರಾಜ್ಯಧಾನಿಯಲ್ಲಿ ಇನ್ನು ಐದು ದಿನ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಾಂತಿನಗರ, ಮೆಜೆಸ್ಟಿಕ್,ರಾಜಾಜಿನಗರ, ಜಯನಗರ, ವಿಜಯನಗರ, ಚಂದ್ರಲೇಔಟ್, ನಂದಿನಿ ಲೇಔಟ್, ಬಸವೇಶ್ವರ ನಗರ, ಸೇರಿದಂತೆ ಹಲವೆಡೆ ಮಳೆ ಸುರಿದೆ. ಮಳೆಯಿಂದಾಗಿ ವಾಹನ ಸವಾರರ ಮೇಲೆ ಪರಿಣಾಮ ಬೀರಿದ್ದು, ಕೆಲವೆಡೆ ಟ್ರಾಫಿಕ್​ ಜಾಮ್​ ಕೂಡ ಉಂಟಾಗಿದೆ.

 

Related