ಸಿಲಿಕಾನ್ ನಲ್ಲಿ ಭಾರೀ ಮಳೆ

ಸಿಲಿಕಾನ್ ನಲ್ಲಿ ಭಾರೀ ಮಳೆ

ಬೆಂಗಳೂರು: ಸಿಲಿಕಾನ್ ನಗರಕ್ಕೆ ಭಾನುವಾರ ಭಾರೀ ಮಳೆ ಸುರಿದಿದೆ.

ಬರೋಬ್ಬರಿ 150ಕ್ಕೂ ಹೆಚ್ಚು ಮರಗಳು,ಮರದ ಕೊಂಬೆಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಅದೃಷ್ಟವಶಾತ್ ಲಾಕ್’ಡೌನ್ ಹಿನ್ನೆಲೆ ಯಾವುದೇ ಪ್ರಾಣಹಾನಿಗಳಾಗಿಲ್ಲ. ಅರಬ್ಬಿ ಸಮುದ್ರದ ಕರಾವಳಿ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಹಾಗೂ ಬಿಸಿಲಿನ ತಾಪಮಾನ ಹೆಚ್ಚಳವಾದ ಹಿನ್ನೆಲೆ ಭಾನುವಾರ ನಗರದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

ಬಿಸಿಲು ಇತ್ತಾದರೂ ಮಧ್ಯಾಹ್ನ 2.30ರ ಸುಮಾರಿಗೆ ಭಾರಿ ಗಾಳಿಯೊಂದಿಗೆ ಮಳೆ ಸುರಿಯಲಾರಂಭಿಸಿತ್ತು. ಸುಮಾರು ಒಂದು ತಾಸಿಗೂ ಅಧಿಕ ಕಾಲ ಸುರಿದ ಬಿರುಗಾಳಿ ಸಹಿತ ಮಳೆಗೆ 150ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಮರ ಬಿದ್ದ ಪರಿಣಾಮ ನಾಲ್ಕೈದು ವಿದ್ಯುತ್ ಕಂಬ ಧರೆಗುರುಳಿವೆ.

ಜೆಪಿ ನಗರದ ಮೊದಲ ಹಂತದಲ್ಲಿ ಮೂರು ಮರಗಳು ಧರೆಗುರುಳಿದ್ದು, ಎರಡು ಕಾರುಗಳು ಜಖಂಗೊಂಡಿವೆ. ಜಯನಗರ ಸ್ಕೂಲ್ ಪಾಯಿಂಟ್ ಬಳಿ ವಿದ್ಯುತ್ ಕಂಬ ನೆಲಕ್ಕೆ ಉರುಳಿ ಎರಡು ಕಾರುಗಳು ಜಖಂಗೊಂಡಿವೆ. ನಗರದ ಪ್ರಮುಖ ಜಂಕ್ಷನ್ ಗಳು, ರಸ್ತೆಗಳಲ್ಲಿ ನೀರು ನಿಂತುಕೊಂಡಿತ್ತು.

Related