ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪ್ರಯೋಗ: ಕ್ಷಮೆಯಾಚಿಸಿದ ಸಿಎಂ

ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪ್ರಯೋಗ: ಕ್ಷಮೆಯಾಚಿಸಿದ ಸಿಎಂ

ಬೆಂಗಳೂರು: ನಿನ್ನೆ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆ ಯಾಚಿಸಿದ್ದಾರೆ.

ಚಿತ್ರದುರ್ಗದಲ್ಲಿ ನಿನ್ನೆ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುವ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕನ್ನು ಟೀಕಿಸುತ್ತಾ, ರಾಷ್ಟ್ರಪತಿ ದ್ರೌಪದಿ ಮುರ್ಮು ಶೋಷಿತ ಸಮುದಾಯಕ್ಕೆ ಸೇರಿದವಳು, ಸಂವಿಧಾನ ರಕ್ಷಕರೆಂದು ಕರೆಸಿಕೊಳ್ಳುವ ಬಿಜೆಪಿಯವರು ಅವಳನ್ನು ನೂತನ ಸಂಸತ್‌ ಭವನ ಉದ್ಘಾಟನೆ ಹಾಗೂ ರಾಮಮಂದಿರ ಉದ್ಘಾಟನೆಗೆ ಕರೆಯಲಿಲ್ಲ. ಇವರ ಯೋಗ್ಯತೆಗೆ ನನ್ನ ವಿರುದ್ಧ ಮಾತನಾಡುತ್ತಾರೆ, ನಾನು ಹಿಂದೂ ವಿರೋಧಿ ಎನ್ನುತ್ತಾರೆ. ನಾನು ಯಾರ ವಿರೋಧಿ ಕೂಡ ಅಲ್ಲ, ನಾನು ಸಮಾಜಪರ ಇರುವವನು ಎಂದು ಆಕ್ರೋಶಭರಿತರಾಗಿ ಮಾತನಾಡಿದ್ದರು.

Related