SIT ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಕುಮಾರಣ್ಣ

SIT ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಕುಮಾರಣ್ಣ

ಬೆಂಗಳೂರು: ಸಿದ್ದರಾಮಯ್ಯ ಅವರೇ ನೀವು ರಾಜಕೀಯವಾಗಿ ಬೆಳೆಬೇಕಾದರೆ ಅದಕ್ಕೆ ಮೂಲ ಕಾರಣವೇ ದೇವೇಗೌಡ್ರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ಅವರ ಹಾಕಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ನಾವು ಏನೇ ತೀರ್ಮಾನ ಮಾಡಿಕೊಂಡರು ಕೂಡ ಮೇಲೆ ಒಬ್ಬ ಇದ್ದಾನೆ ಅವನ್ನೆಲ್ಲ ನೋಡಿಕೊಳ್ಳುತ್ತಾನೆ, ಅಂತಿಮ ತೀರ್ಪನ್ನು ಮೇಲಿರುವವನು ಕೊಡುತ್ತಾನೆ ಎಂದು ಹೇಳಿದರು.

ಈಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ಜನತೆಗೆ ಯಾವುದೇ ಅನ್ಯಾಯವಾದರೂ ಕೂಡ ಅವರಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಸರ್ಕಾರದಿಂದ ಆಗುವುದಿಲ್ಲವೆಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ರಾರಾಜಿಸುತ್ತಿವೆ ಡಿಕೆಶಿ ವಿರುದ್ಧ ಪೋಸ್ಟರ್ಗಳು..!

SIT ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಇನ್ನು ಮಾಧ್ಯಮಗೋಷ್ಠಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರು ಭಾಗಿಯಾದರು.

 

 

Related