ಶಿವಗಂಗೆ ಸಂಪೂರ್ಣ ಜಲೋಧ್ಬವ..!

ಶಿವಗಂಗೆ ಸಂಪೂರ್ಣ ಜಲೋಧ್ಬವ..!

ನೆಲಮಂಗಲ, ಆ 05 : ಶಿವಗಂಗೆ ಎಂಬುದು ಚಾರಣಕ್ಕೊಂದು ಕಾರಣ, ಭಕ್ತಿಗೊಂದು ಹಾದಿ, ದೇವಾಲಯಗಳ ದಿಬ್ಬಣ, ಸೂರ್ಯೋದಯವಿಲ್ಲಿ ಸಂಕ್ರಮಣ. ಇಂತಹ ಪವಿತ್ರವಾದ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ವಿಸ್ಮಯ ರೀತಿಯಲ್ಲಿ ಜಲೋಧ್ಬವವಾಗಿದೆ.

ದಕ್ಷಿಣ ಕಾಶಿ ಎಂದೇ ಹೆಸರಾದ ಶಿವಗಂಗೆ ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿದ್ದು, ಬೆಂಗಳೂರಿಗರ ಅಚ್ಚುಮೆಚ್ಚಿನ ಸ್ಥಳ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಿಂದ 6 ಕಿ.ಮೀ ದೂರದಲ್ಲಿ ಶಿವಗಂಗೆ ಬೆಟ್ಟ ಕಾಣಿಸುತ್ತದೆ. ಪಶ್ಚಿಮದಿಂದ ನೋಡಿದರೆ ಇಡೀ ಬೆಟ್ಟವೇ ಶಿವಲಿಂಗದ ಆಕಾರದಲ್ಲಿ ಕಾಣಿಸುತ್ತದೆ. ಪೂರ್ವದಿಂದ ನೋಡಿದರೆ ಹೋರಿಯಂತೆಯೂ, ಉತ್ತರದಿಂದ ಸರ್ಪದಂತೆಯೂ ಹಾಗೂ ದಕ್ಷಿಣದಿಂದ ಗಣೇಶನಂತೆಯೂ ಕಾಣಿಸುತ್ತದೆ. ಈ ಬೆಟ್ಟದ ಮೇಲೆ ಗಂಗಾಧರೇಶ್ವರ ಹಾಗೂ ಹೊನ್ನಮ್ಮದೇವಿ ದೇವಾಲಯಗಳಿವೆ.

ಶಿವಗಂಗೆ ಬೆಟ್ಟದ ತುದಿಯಲ್ಲಿ ಏಕಶಿಲೆಯಿಂದ ನಿರ್ಮಿಸಲಾದ ಬೃಹತ್ ನಂದಿ ವಿಗ್ರಹವಿದೆ. ಇದರಿಂದ ಮುಂದೆ ಸಾಗಿದರೆ ಪಾತಾಳಗಂಗೆ ದೇವಾಲಯ ಸಿಗುತ್ತದೆ. ಇಲ್ಲಿ ದೇವಾಲಯದ ಕೆಳಗೆ ಜಲ ಹರಿಯುತ್ತದೆ. ಇದೀಗ ಸಮುದ್ರ ಮಟ್ಟದಿಂದ 3,600 ಅಡಿ ಎತ್ತರದ ಶಿಖರವಾದ ಪಾತಾಳ ಗಂಗೆಯಲ್ಲಿ ವಿಸ್ಮಯಕಾರಿ ರೀತಿಯಲ್ಲಿ ಜಲಸಾಗರ ಹರಿದು ಬಂದಿದೆ. ಇದೇ ಮೊದಲ ಬಾರಿಗೆ ಪಾತಾಳ ಗಂಗೆಯಲ್ಲಿ ನೀರು ಉಕ್ಕಿ ಹರಿದಿದ್ದು, ದೇವಾಲಯ ಸಂಪೂರ್ಣವಾಗಿ ಜಲಾವೃತಗೊಂಡಿದೆ.

Related