ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಸಿಹಿಸುದ್ದಿ!

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಸಿಹಿಸುದ್ದಿ!

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ರಾಜ್ಯದ ಗ್ರಾಮೀಣಾ ಪ್ರದೇಶದ ಜನತೆಗೆ ನೀಡಿದ್ದು, ಪ್ರತಿ ಹೋಬಳಿಗೊಂದು ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿರುವ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತೀಕರಣ ಮಾಡಲಾಗುವುದು, 80 ಸಾವಿರ ಜನಸಂಖ್ಯೆಗೆ ಸಮುದಾಯ ಚಿಕಿತ್ಸಾ ಕೇಂದ್ರ ಸ್ಥಾಪಿಸುತ್ತೇವೆ. ರಾಜ್ಯದ ಪ್ರತಿ ಪ್ರಾಥಮಿಕ ಚಿಕಿತ್ಸಾ ಆರೋಗ್ಯ ಕೇಂದ್ರಕ್ಕೆ ಒಂದೊAದು ಆಂಬುಲೆನ್ಸ್ ಇರುತ್ತೆ ಎಂದು ಹೇಳಿದರು.

ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುವ ವೈದ್ಯರು ಮತ್ತು ನರ್ಸ್ಗಳಿಗೆ ವಸತಿ ಸೌಲಭ್ಯಗಳನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಬಡವರೂ ಕೂಡ ಶೂಗರ್ ಟೆಸ್ಟ್, ಬೇರೆ ಬೇರೆ ರಕ್ತದ ಪರೀಕ್ಷೆಗಳನ್ನು ಉಚಿತವಾಗಿ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀಡಲು ಚಿಂತನೆ ನಡೆಸಲಾಗಿದೆ ಎಂದರು.

Related