ʼಲೋಕʼ ಮಗನಿಗೆ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು!

ʼಲೋಕʼ ಮಗನಿಗೆ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು!

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯ ರಾಜಕೀಯದಲ್ಲಿ ಭರ್ಜರಿ ಸಿದ್ಧತೆ ನಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಶಾಸಕ ಸೋಮಶೇಖರ್ ಅವರು ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಮಶೇಖರ್ ಅವರ ಮಗನಿಗೆ ಕಾಂಗ್ರೆಸ್ ನಿಂದ ಟಿಕೆಟ್ ಕೊಡಿಸುವುದಕ್ಕಾಗಿ ಕಾಂಗ್ರೆಸ್ನ ಘಟಾನುಘಟಿಗಳನ್ನು ಭೇಟಿ ಮಾಡುತ್ತಿದ್ದಾರೆ. ನಿನ್ನೆ ಜನವರಿ 1 ರಂದು ಸೋಮಶೇಖರ್ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಇದರ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರೂ, ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸಬೇಕು ಎಂದು ಸೋಮಶೇಖರ್ ಒತ್ತಾಯಿಸಿದ್ದಾರೆ.

ಒಂದು ವೇಳೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಕಣಕ್ಕಿಳಿಸಿದರೆ ಸೋಮಶೇಖರ್ ಅವರನ್ನು ಬೆಂಬಲಿಸುವ ಸಾಧ್ಯತೆ ಕಡಿಮೆಯಿದ್ದು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಚಿಂತನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಪುತ್ರ ನಿಶಾಂತ್‌ ಅಭ್ಯರ್ಥಿಯಾಗಬೇಕೆಂದು ಅವರು ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಪುತ್ರನಿಗೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್‌ಗೆ ಕಳುಹಿಸಿ ಕಣಕ್ಕೆ ಇಳಿದಿದ್ದಾರೆ.

 

Related