ಸಿಎಂ ಭೇಟಿ ಮಾಡಿದ ಸಚಿವ ಈಶ್ವರ್ ಖಂಡ್ರೆ ಪುತ್ರ

ಸಿಎಂ ಭೇಟಿ ಮಾಡಿದ ಸಚಿವ ಈಶ್ವರ್ ಖಂಡ್ರೆ ಪುತ್ರ

ಬೀದರ್: ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಬೀದರ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿಯೇ ಟಿಕೆಟ್‌ಗೆ ಪ್ರಯತ್ನಿಸಿದ್ದ ಸಾಗರ್‌ ಖಂಡ್ರೆ ಈ ಸಲ ಬೀದರ್‌ನಲ್ಲಿ ಭಗವಂತ್‌ ಖೂಬಾ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಇನ್ನು ಈ ಕುರಿತು ಇಂದು ಬೀದರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಕಾಂಕ್ಷಿ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ಮುಖ್ಯಮಂತ್ರಿಗಳು ಸಾಗರ್ ಅವರಿಗೆ ಶುಭ ಹಾರೈಸಿದರು. ಈಶ್ವರ್ ಖಂಡ್ರೆ, ಸಚಿವ ರಹೀಂ ಖಾನ್ ಸೇರಿ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.‌

Related