ಇಡಿ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ಇಡಿ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ದೆಹಲಿ ಜು21: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದು, ಮಕ್ಕಳಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ತಾಯಿ ಜೊತೆ ಕಚೇರಿಗೆ ಆಗಮಿಸಿದ್ದಾರೆ.

ಕೊರೊನಾ ವೈರಸ್‌ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಚಾರಣೆಗೆ ಈ ಹಿಂದೆ ನೀಡಿದ್ದ ನೋಟಿಸ್‌ ಹಿನ್ನೆಲೆಯಲ್ಲಿ ಹಾಜರಾಗಿರಲಿಲ್ಲ.

ಕೊರೊನಾದಿಂದ ಚೇತರಿಸಿಕೊಂಡ ನಂತರ ಇಡಿ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿತ್ತು.

ಇಂದು ಬೆಳಿಗ್ಗೆ ಇಡಿ ಕಚೇರಿಗೆ ಸೋನಿಯಾ ಗಾಂಧಿ ಹಾಜರಾಗಿದ್ದು, ವಿಚಾರಣೆ ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ದೆಹಲಿ, ಬೆಂಗಳೂರು ಸೇರಿದಂತೆ ದೇಶದ ನಾನಾ ಕಡೆ ಪ್ರತಿಭಟನೆ ನಡೆಸಿದರು. ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಇಡಿ ವಿಚಾರಣೆ ನಡೆಸುತ್ತಿದ್ದು, ಇತ್ತೀಚೆಗೆ ರಾಹುಲ್‌ ಗಾಂಧಿ ಅವರನ್ನು ಸತತ 5 ದಿನಗಳ ಕಾಲ 10 ಗಂಟೆಯಂತೆ ಸುದೀರ್ಘ ವಿಚಾರಣೆ ನಡೆಸಿತ್ತು. ಇದೀಗ ಸೋನಿಯಾ ಗಾಂಧಿ ವಿಚಾರಣೆ ಕೈಗೆತ್ತಿಕೊಂಡಿದೆ.

Related