ಇಡಿ ಮುಂದೆ ಹಾಜರಾಗಲಿರುವ ಸೋನಿಯಾ…!

ಇಡಿ ಮುಂದೆ ಹಾಜರಾಗಲಿರುವ ಸೋನಿಯಾ…!

ನವದೆಹಲಿ, ಜುಲೈ 26 : ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಮತ್ತೆ ವಿಚಾರಣೆ ನಡೆಸಲಿದೆ. ಮಧ್ಯಾಹ್ನದ ವೇಳೆಗೆ ಅವರು ವಿಚಾರಣೆಗಾಗಿ ಇ.ಡಿ ಕಚೇರಿಗೆ ಆಗಮಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರವೇ ಸೋನಿಯಾ ಗಾಂಧಿ ವಿಚಾರಣೆ ಎದುರಿಸಬೇಕಿತ್ತು ಆದರೆ ಅದನ್ನು ಜಾರಿ ನಿರ್ದೇಶನಾಲಯ ಒಂದು ದಿನ ಮುಂದೂಡಿತ್ತು. ಜುಲೈ 21ರಂದು ಸೋನಿಯಾ ಗಾಂಧಿ ಅವರನ್ನು ಎರಡು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿತ್ತು. ಇ.ಡಿ ಯ 28 ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಿಗಳ ಪ್ರಕಾರ, ಸೋನಿಯಾ ಗಾಂಧಿ ತನಿಖೆಗೆ ಹಾಜರಾದ ಮೊದಲ ದಿನದಂತೆಯೇ, ಕೋವಿಡ್‌ಮಾರ್ಗಸೂಚಿಗಳನ್ನು ಪಾಲಿಸಲಾಗುವುದು. ವೈದ್ಯರು ಮತ್ತು ಆಂಬ್ಯುಲೆನ್ಸ್ ನಿಯೋಜನೆ, ಸೇರಿದಂತೆ ತನಿಖೆ ನಡೆಸುವ ಅಧಿಕಾರಿಗಳದ್ದು ಕೂಡ ಕೋವಿಡ್ ನೆಗೆಟಿವ್ ವರದಿ ಪಡೆಯಲಾಗುವುದು. ವಿಚಾರಣೆ ವೇಳೆ ಸೋನಿಯಾ ಗಾಂಧಿ ಮತ್ತು ತನಿಖಾಧಿಕಾರಿಗಳ ನಡುವೆ ಸೂಕ್ತ ಅಂತರ ಕಾಪಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

Related