ಮತ್ತೆ ವಿಚಾರನೆಗೆ ಹಾಜರಾಗಲಿರುವ ಸೋನಿಯಾ..

ಮತ್ತೆ ವಿಚಾರನೆಗೆ ಹಾಜರಾಗಲಿರುವ ಸೋನಿಯಾ..

ನವದೆಹಲಿ, ಜುಲೈ 27 : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ಸೋನಿಯಾ ಗಾಂಧಿಯವರನ್ನು ವಿಚಾರಣೆ ನಡೆಸಿತು. ವಿಚಾರಣೆ ಇನ್ನೂ ಪೂರ್ತಿಯಾಗದ ಹಿನ್ನೆಲೆಯಲ್ಲಿ ಬುಧವಾರವೂ ಕೂಡ ವಿಚಾರಣೆಗಾಗಿ ಹಾಜಾರುಗುವಂತೆ ಕಾಂಗ್ರೆಸ್ ವಕ್ತಾರೆ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ ಸೂಚನೆ ನೀಡಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವದ ಕಾಂಗ್ರೆಸ್ ಬೆಂಬಲಿತ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ನಲ್ಲಿ ನಡೆದ ಆಪಾದಿತ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಸತತ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವುದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಸತ್ಯಾಗ್ರಹ ನಡೆಸಿತು. ಸೇಡಿನ ರಾಜಕೀಯ ಮಾಡಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸೋನಿಯಾ ಗಾಂಧಿ ವಿಚಾರಣೆ ವೇಳೆಯಲ್ಲಿ ದೆಹಲಿಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬುಧವಾರವೂ ಕೂಡ ಅವರು ವಿಚಾರಣೆಗೆ ಹಾಜರಾಗುತ್ತಿದ್ದು ಕಾಂಗ್ರೆಸ್ ಮತ್ತೆ ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ.

Related