ಸೌಮ್ಯ ರೆಡ್ಡಿ ಭರ್ಜರಿ ಮತ ಪ್ರಚಾರ

ಸೌಮ್ಯ ರೆಡ್ಡಿ ಭರ್ಜರಿ ಮತ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೆಚ್ ಎಸ್ ಆರ್ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಬರುವಂತಹ ವಾರ್ಡಗಳಲ್ಲಿ ಮಂಗಳವಾರ ಸಂಜೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀಮತಿ ಸೌಮ್ಯ ರಾಮಲಿಂಗ ರೆಡ್ಡಿ ರವರು ಸಾವಿರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ಹೆಚ್. ಎಸ್. ಆರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವಾಸುದೇವ ರೆಡ್ಡಿ ರವರು ಮತ್ತು ಕಾಂಗ್ರೆಸ್ ಮುಖಂಡರುಗಳು, ಕೆಪಿಸಿಸಿ ಸದಸ್ಯರುಗಳು, ಡಿಸಿಸಿ ಸದಸ್ಯರುಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ವಾರ್ಡ್ ಅಧ್ಯಕ್ಷರುಗಳು ಮತ್ತು ಎಲ್ಲ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಹಾಗೂ ಅನೇಕ ಕಾರ್ಯಕರ್ತರಗಳು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ‍ರೋಡ್ ಶೋ ಯಶಸ್ವಿಗೊಳಿಸಿದರು.

 

Related