ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ಭಾರತ ಸಿಎಂಗಳ ಸಭೆ: ಕರ್ನಾಟಕ ಸಿಎಂ ಭಾಗಿ

ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ಭಾರತ  ಸಿಎಂಗಳ ಸಭೆ: ಕರ್ನಾಟಕ ಸಿಎಂ ಭಾಗಿ

ತಿರುವನಂತಪುರಂ: ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರುಗಳೊಂದಿಗೆ ಪಾಲ್ಗೊಂಡರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ದಕ್ಷಿಣ ವಲಯ ಮಂಡಳಿ ಸಭೆನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದಕ್ಷಿಣ ಭಾರತದ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯಗಳ ನಡುವಿನ ನದಿ ನೀರಿನ ಹಂಚಿಕೆ ವಿವಾದ, ಸಂಪರ್ಕ, ಕಡಲ ತೀರದಲ್ಲಿ ಭದ್ರತೆ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶ ದಕ್ಷಿಣ ಚಲಯ ಮಂಡಳಿಯಲ್ಲಿ ಸೇರಿದ್ದು, ಈ ರಾಜ್ಯಗಳ ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು, ಕೇಂದ್ರ ಹಿರಿಯ ಅಧಿಕಾರಿಗಳು ಹಾಗೂ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Related