ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ಎಲ್ಲಷ್ಟು ನಂಬಿಕೆ ಇಲ್ಲ. ಆದ್ದರಿಂದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ತನಿಖೆಯನ್ನು ಎನ್ಐಎ ಗೆ ವಹಿಸುವಂತೆ ನಾವು ಇಂದು ಇಂದು (ಶುಕ್ರವಾರ ಮೇ 09) ರಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.
ನಗರದಲ್ಲಿಂದ್ದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಇದನ್ನೂಓದಿ: ʼಕೈʼ ನಾಯಕರಿಂದ ತಿರಂಗಾ ಯಾತ್ರೆ!
ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಸ್ಪೀಕರ್ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದರು.
ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ ಆಪರೇಶನ್ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್ಐಎ ಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.